fbpx
ಸಮಾಚಾರ

ಬಾಟಲ್ ಕ್ಯಾಪ್ ಚಾಲೆಂಜ್‍ನಲ್ಲಿ ಎಲ್ಲರನ್ನು ಮೀರಿಸಿದ ದರ್ಶನ್ ಪುತ್ರ: ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಬಾಟಲ್​ ಕ್ಯಾಪ್​ ಚಾಲೆಂಜ್​ ಅನ್ನು ವಿನೀಶ್​ ದರ್ಶನ್​ ಸ್ವೀಕರಿಸಿದ್ದು, ಯಶಸ್ವಿಯಾಗಿ ಮಾಡಿದ್ದಾರೆ. ಮನೆಯಲ್ಲೇ ಬಾಟಲ್​ ಇಟ್ಟು ಕಿಕ್​ ಮಾಡುವ ಮೂಲಕ ವಿನೀಶ್​ ಕ್ಯಾಪ್​ ಅನ್ನು ತೆಗೆದಿದ್ದಾರೆ. ವಿನೀಶ್ ಬಾಟಲ್ ಚಾಲೆಂಜ್ ಮಾಡಿದ ವಿಡಿಯೋವನ್ನು ಅವರ ತಾಯಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.

 

 

ವಿಜಯಲಕ್ಷ್ಮಿ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿ, ಬಾಟಲ್ ಕ್ಯಾಪ್ ಚಾಲೆಂಜ್, ವಿನೀಶ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋಗೆ ಇದುವರೆಗೂ 2 ಸಾವಿರಕ್ಕೂ ಹೆಚ್ಚು ಲೈಕ್ಸ್ ಹಾಗೂ 479 ರೀ-ಟೀಟ್ ಪಡೆದುಕೊಂಡಿದೆ.

ವಿನೀಶ್ ಈ ಹಿಂದೆ ‘ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆಗೆ ಒಂದು ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚಿಗಷ್ಟೆ ‘ಯಜಮಾನ’ ಸಿನಿಮಾದ ಟೈಟಲ್ ಹಾಡಿನಲ್ಲಿಯೂ ಬಂದು ಹೋಗಿದ್ದರು.

ಏನಿದು ಚಾಲೆಂಜ್?
ಒಂದು ಟೇಬಲ್ ಮೇಲೆ ಒಂದು ಬಾಟಲಿ ಇಡಬೇಕು. ಅದರ ಮುಚ್ಚಳವನ್ನು ಬಾಟಲ್ ಮೇಲೆ ಸಡಿಲವಾಗಿ ತಿರುಗಿ ಇಡಬೇಕು. ನಂತರ ಚಾಲೆಂಜ್ ಸ್ವೀಕರಿಸಿದವರು ಸ್ವಲ್ಪ ದೂರದಲ್ಲಿ ನಿಂತು ಒಂದು ಸುತ್ತು ತಿರುಗಿ ಕಾಲಿನಿಂದ ಬಾಟಲಿ ಕ್ಯಾಪನ್ನು ಒದಿಯಬೇಕು. ಈ ಪ್ರಕ್ರಿಯೆಯಲ್ಲಿ ಬಾಟಲಿ ಕೆಳಗೆ ಬೀಳಬಾರದು. ಹೀಗೆ ಬಾಟಲ್ ಬೀಳದಂತೆ ಕ್ಯಾಪ್ ಮಾತ್ರ ಕೆಳಗೆ ಬೀಳಿಸಿದರೆ ಈ ಚಾಲೆಂಜ್ ಗೆದ್ದಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top