fbpx
ಸಮಾಚಾರ

ನೌಕರರ ಭವಿಷ್ಯ ನಿಧಿ ಸಂಘಟನೆಯಿಂದ 2,189 ಹುದ್ದೆಗಳಿಗೆ ಅರ್ಜಿ ಅಹ್ವಾನ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಒ) ಮತ್ತೊಂದು ಬೃಹತ್‌ ನೇಮಕ ಅಧಿಸೂಚನೆ ಹೊರಡಿಸಿದೆ. ಕಳೆದ ತಿಂಗಳಷ್ಟೇ 280 ಅಸಿಸ್ಟೆಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದ ಇಪಿಎಫ್‌ಒ ಈಗ 2,189 ಸೋಷಿಯಲ್‌ ಸೆಕ್ಯೂರಿಟಿ ಅಸಿಸ್ಟೆಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 27 ಜೂನ್ ನಿಂದ 21 ಜುಲೈ 2019 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳೇನು?: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: 18 ರಿಂದ 27 ವರ್ಷ (ಜುಲೈ 01, 2019ರಂತೆ)

ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ

ಅರ್ಜಿ ಶುಲ್ಕ: ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ / ಸ್ತ್ರೀ / ಮಾಜಿ ಸೈನಿಕರು: ರೂ. 250 / -, ಎಲ್ಲಾ ಇತರರು: ರೂ. 500 / – ಆಯ್ಕೆ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ:

ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top