fbpx
ಸಮಾಚಾರ

“ನಾನು ಬಿಜೆಪಿ ಸೇರಿಕೊಳ್ಳುತ್ತಿದ್ದೇನೆ” ರೋಷನ್ ಬೇಗ್ ಸ್ಪಷ್ಟನೆ.

ಮೈತ್ರಿ ಸರ್ಕಾರದಲ್ಲಿ ರಾಜೀನಾಮೆ ಟ್ರೆಂಡ್ ಮುಂದುವರೆದಿದ್ದು, ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ಮಂಗಳವಾರ ರಾಜೀನಾಮೆ ನೀಡಲಿರುವುದು ಖಚಿತವಾಗಿದೆ. ಕಾಂಗ್ರೆಸ್ ಗೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಯಾಗಲಿದ್ದೇನೆ ಎಂದು ರೋಷನ್ ಬೇಗ್ ಅವರೇ ಹೇಳಿದ್ದಾರೆ, ಇನ್ನೂ ಕಾಂಗ್ರೆಸ್ ಸದಸ್ಯ ಸ್ಥಾನಕ್ಕೂ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲಿದ್ದಾರೆ.

 

 

ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿರುವ ಕಾಂಗ್ರೆಸ್‍ನಿಂದ ಅಮಾನತುಗೊಂಡಿರುವ ಮಾಜಿ ಸಚಿವ, ಹಾಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಸೋಮವಾರ ಹೇಳಿದ್ದಾರೆ.

‘ನನ್ನನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಮತ್ತು ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಅಮಾನತು ಮಾಡಿದ ಕ್ರಮ ನನಗೆ ತೀರಾ ನೋವು ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವವಿಲ್ಲ, ಅದು ಸಂಪೂರ್ಣ ವಿಫಲವಾಗಿದೆ. ನಾನು ಮುಂಬೈಗಾಗಲೀ, ಗೋವಾಕ್ಕಾಗಲೀ ಹೋಗುವುದಿಲ್ಲ. ಬೆಂಗಳೂರಿನಲ್ಲೇ ಇರುತ್ತೇನೆ. ಆದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಂತರ ಬಿಜೆಪಿಗೆ ಸೇರಿಕೊಳ್ಳುತ್ತೇನೆ” ಎಂದು ರೋಷನ್ ಬೇಗ್ ಹೇಳಿದರು.

ತಾವು ಬಿಜೆಪಿ ಸೇರುವ ಕುರಿತ ವರದಿಗೆ ಪ್ರತಿಕ್ರಿಯೆ ನೀಡಿದ ಬೇಗ್ “”ನಾನು ಬಿಜೆಪಿ ಸೇರಿದರೆ ತಪ್ಪೇನು? ಬಿಜೆಪಿ ಸಹ ಒಂದು ರಾಜಕೀಯ ಪಕ್ಷ” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top