fbpx
ಸಮಾಚಾರ

‘ಮುನಿರತ್ನ ಕುರುಕ್ಷೇತ್ರ’ ಚಿತ್ರದಿಂದ ಮತ್ತೊಂದು ಟ್ರೇಲರ್!

ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಟ್ರೇಲರ್​ ಕುರಿತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಮೂಲಕ ಅಸಮಾಧಾನ ಹೊರಹಾಕಿರುವ ಅಭಿಮಾನಿಗಳು, ಈ ಹಿಂದಿನ ಟೀಸರ್​ಗಳನ್ನೇ ಜೋಡಿಸಿ ನಿರ್ಮಾಪಕ ಮುನಿರತ್ನ ಅವರು ಟ್ರೈಲರ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ದರ್ಶನ್ 50ನೇ ಸಿನಿಮಾ ಹಾಗೂ ಒಂದು ಬಿಗ್ ಬಜೆಟ್ ಪೌರಾಣಿಕ ಸಿನಿಮಾ ಎಂಬ ಕಾರಣಕ್ಕೆ ‘ಕುರುಕ್ಷೇತ್ರ’ ಟ್ರೇಲರ್ ಬಗ್ಗೆ ದೊಡ್ಡ ನಿರೀಕ್ಷೆ ಇತ್ತು. ಆದರೆ, ದರ್ಶನ್ ಅಭಿಮಾನಿಗಳಿಗೆ ಟ್ರೇಲರ್ ನಿರಾಸೆ ಮೂಡಿಸಿದೆ.

ಟ್ರೇಲರ್‌ನಲ್ಲಿ ಅಭಿಮಾನಿಗಳನ್ನು ತೃಪ್ತಿಪಡಿಸುವಲ್ಲಿ ವಿಫಲವಾಗಿದೆ. ಟ್ರೇಲರ್ ಪೂರ್ತಿ ಮುನಿರತ್ನ ಹೆಸರೇ ಕಾಣುತ್ತದೆ ಹೊರತು ಯಾವ ಹೊಸತನವೂ ಕಾಣುವುದಿಲ್ಲ. ನಿರೀಕ್ಷೆ ಹುಟ್ಟಿಸಿದಷ್ಟು ಟ್ರೇಲರ್ ಚೆನ್ನಾಗಿಲ್ಲ ಎಂಬ ಅಭಿಪ್ರಾಯ ಮೂಡಿದೆ. ಎರಡು ಟೀಸರ್ ಸೇರಿಸಿ ಮಾಡಿರುವ ಟ್ರೇಲರ್ ಇದು ಎಂದು ಟ್ರೋಲ್ ಮಾಡಲಾಗುತ್ತಿದೆ.

ಮತ್ತೊಂದು ಟ್ರೈಲರ್:
ಇದರಿಂದ ಎಚ್ಚೆತ್ತುಕೊಂಡಿರುವ ಚಿತ್ರತಂಡ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದ ಆಪ್ತವಲಯದ ಪ್ರಕಾರ ಕುರುಕ್ಷೇತ್ರ ಚಿತ್ರದ ಮತ್ತೊಂದು ಟ್ರೈಲರ್ ಆಗಸ್ಟ್ 12ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ ಈ ಟ್ರೈಲರ್ ಅನ್ನು ಎಲ್ಲಾ ಐದೂ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತದೆಯಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top