fbpx
ಸಮಾಚಾರ

ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ ಮುಂಬೈ ಪೊಲೀಸರು.

ಸಮ್ಮಿಶ್ರ ಸರ್ಕಾರದ ಕಾರ್ಯ ವೈಖರಿಗೆ ಬೇಸತ್ತು ರಾಜಿನಾಮೆ ನೀಡಿ ಮುಂಬಯಿಯಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ, ಹೀಗಾಗಿ ಅತೃಪ್ತ ಶಾಸಕರು ಇರುವ ಮುಂಬಯಿಯ ರಿನೈಸೆನ್ಸ್ ಹೋಟೆಲ್ ಗೆ ಆಗಮಿಸಿದ್ದಾರೆ.

 

 

ಆದರೆ ಅತೃಪ್ತ ಶಾಸಕರು ತಂಗಿರುವ ಹೋಟೆಲ್ ಬಳಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದು, ಶಿವಕುಮಾರ್ ಅವರನ್ನು ಹೋಟೆಲ್ ಒಳಗೆ ಬಿಡಲು ಪೊಲೀಸರು ನಿರಾಕರಿಸಿದ್ದಾರೆ. ಹೊಟೇಲ್ ಮುಂದೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿಕೆ ಶಿವಕುಮಾರ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹೋಟೆಲ್ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹೋಟೆಲ್ ಸಮೀಪ 144 ಸೆಕ್ಷನ್ ಹಾಕಿ ನಿಷೇಧಾಜ್ಞೆ ವಿಧಿಸಿದ್ದರು. ಆದರೂ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತತ 6 ಗಂಟೆಗಳ ಕಾಲ ಹೋಟೆಲ್ ಮುಂಭಾಗ ಪ್ರತಿಭಟಿಸಿದ್ದ ಅವರನ್ನು ಪೊಲೀಸರು ತಮ್ಮ ವ್ಯಾನಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಡಿಕೆಶಿ ಜೊತೆ ಸಚಿವ ಜಿಟಿಡಿ, ಬಾಲಕೃಷ್ಣ ಹಾಗೂ ಶಿವಲಿಂಗೇ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top