fbpx
ಸಮಾಚಾರ

“ಸೋಲು, ಗೆಲುವು ಬದುಕಿನ ಒಂದು ಭಾಗ” ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸಂದೇಶ.

2019ರ ವಿಶ್ವಕಪ್ ಕ್ರಿಕೆಟ್ ಸೆಮಿ ಫೈನಲ್ ಪಂದ್ಯದಲ್ಲಿ ಸೋಲುಂಡು ಟೂರ್ನಿಯಿಂದ ಹೊರ ನಡೆದಿರುವ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ರವಾನಿಸಿದ್ದಾರೆ. ಸೋಲು ಗೆಲುವು ಜೀವನದ ಒಂದು ಭಾಗ ಎಂದು ಹೇಳಿಸುವ ಪ್ರಧಾನಿಗಳು ಆಟಗಾರರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

‘ನಿರಾಶಾದಾಯಕ ಫಲಿತಾಂಶ. ಆದರೂ ಪಂದ್ಯದ ಅಂತಿಮ ಕ್ಷಣದವರೆಗೂ ಟೀಂ ಇಂಡಿಯಾ ಜಿದ್ದಾಜಿದ್ದಿನ ಹೋರಾಟ ನೀಡಿತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿತು. ಗೆಲುವು ಹಾಗೂ ಸೋಲುಗಳ ಜೀವನದ ಅವಿಭಾಜ್ಯ ಅಂಗ. ತಂಡದ ಮುಂದಿನ ಪ್ರಯತ್ನಕ್ಕೆ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನ್ಯೂಜಿಲೆಂಡ್ ನೀಡಿದ 240 ರನ್ ಗಳ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ಕಳಪೆ ಆರಂಭ ಕಂಡಿತು. ಮೇಲ್ಪಂಕ್ತಿಯ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ರವೀಂದ್ರ ಜಡೇಜಾ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರನ್ನು ಹೊರತು ಪಡಿಸಿ ಬೇರೆ ಎಲ್ಲ ಬ್ಯಾಟ್ಸ್ ಮನ್ ಗಳ ಬ್ಯಾಟ್ ನಿಂದ ನಿರೀಕ್ಷಿತ ರನ್ ಗಳು ಹರಿಯಲಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top