fbpx
ಸಮಾಚಾರ

ಎರಡನೇ ಮಗುವಿಗೆ ತಾಯಿಯಾದ ವರದನಾಯಕ ನಟಿ ಸಮೀರಾ ರೆಡ್ಡಿ.

ಬಹುಭಾಷಾ ನಟಿ ಸಮೀರಾ ರೆಡ್ಡಿ ಎರಡನೇ ಬಾರಿ ತಾಯಿಯಾಗಿದ್ದು, ಇಂದು ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಬೀಮ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಸಮೀರಾ ಜನ್ಮ ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಮೀರಾ ತನ್ನ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕುವ ಮೂಲಕ ಅಭಿಮಾನಿಗಳ ಜೊತೆ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

 

 

View this post on Instagram

 

Our little angel came this morning 🌸My Baby girl ! Thank you for all the love and blessings ❤️🙏🏻 #blessed

A post shared by Sameera Reddy (@reddysameera) on

 

ಸಮೀರಾ ರೆಡ್ಡಿ ಮತ್ತು ಅಕ್ಷೈ ವರ್ಡೆ ದಂಪತಿಗೆ ಇದು ಎರಡನೆಯ ಮಗುವಾಗಿದ್ದು ಈಗಾಗಲೇ 3 ವರ್ಷದ ಹನ್ಸ್ ವರ್ಡೆ ಎಂಬ ಮಗನಿದ್ದಾನೆ. ಮಗುವಿನ ಕೈ ಹಿಡಿದುಕೊಂಡಿರುವ ಫೋಟೋವನ್ನು ಹಾಕಿ ಅದಕ್ಕೆ, “ನಮ್ಮ ಬೆಳಗ್ಗೆ ನಮ್ಮ ಏಂಜೆಲ್ ಜನಿಸಿದ್ದಾರೆ. ನನ್ನ ಹೆಣ್ಣು ಮಗು. ನಿಮ್ಮ ಪ್ರೀತಿ ಹಾಗೂ ಆಶೀರ್ವಾದಕ್ಕೆ ಧನ್ಯವಾದಗಳು” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಸಮೀರಾ ರೆಡ್ಡಿ 2014ರಲ್ಲಿ ಉದ್ಯಮಿ ಅಕ್ಷಯ್ ವಾರ್ದೆ ಅವರನ್ನು ಮದುವೆಯಾಗಿದ್ದರು. ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಅವರ ಜೊತೆ ನಟಿಸಿದ್ದಾರೆ. ಅಲ್ಲದೇ ಕನ್ನಡದಲ್ಲೂ ಕಿಚ್ಚ ಸುದೀಪ್ ಅವರ ಜೊತೆ `ವರದನಾಯಕ’ ಚಿತ್ರದಲ್ಲಿ ನಟಿಸಿದ್ದಾರೆ. ಸಮೀರಾ 2014ರಲ್ಲಿ ಮದುವೆ ಆದ ಬಳಿಕ ಚಿತ್ರರಂಗದಿಂದ ದೂರವಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top