fbpx
ಸಮಾಚಾರ

ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ: ಚಂದ್ರಯಾನ 2 ಉಡಾವಣೆ ರದ್ದು, ಅನಿರ್ದಿಷ್ಟಾವಧಿಗೆ ಮುಂದೂಡಿಕೆ.

ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಯಾನ-2 ಉಡಾವಣೆ ದಿನಾಂಕವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಂದು ಮುಂಜಾನೆ 2.51ರಲ್ಲಿ ಚಂದ್ರಯಾನ ಉಡಾವಣೆ ನಡೆಯಬೇಕಿತ್ತು. ಆದರೆ, ಅದಕ್ಕೂ 56 ನಿಮಿಷಗಳ ಮುಂಚಿತವಾಗಿ 978 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ರದ್ದುಗೊಳ್ಳಿಸಲಾಯಿತು.

 

ಚಂದ್ರಯಾನ-2 ಯೋಜನೆಗಾಗಿ ಇಸ್ರೋ GSLV Mk III (ಜಿಎಸ್​ಎಲ್​ವಿ ಎಂಕೆ 3) ಎಂಬ ಹೊಸ ಮಾದರಿಯ ನೂತನ ತಂತ್ರಜ್ಞಾನಗಳನ್ನು ಹೊಂದಿರುವ ರಾಕೆಟ್ ಒಂದನ್ನು ನಿರ್ಮಿಸಿದೆ. ಇದರ ಮೂಲಕ ಉಪಗ್ರಹವನ್ನು ಭೂ ಕಕ್ಷೆಯಿಂದ ಚಂದ್ರನ ಮೇಲ್ಮೈಗೆ ಉಡಾಯಿಸಲು ಯೋಜನೆ ರೂಪಿಸಲಾಗಿತ್ತು. ಕವಾಟದಲ್ಲಿನ ಇಂಧನ ಸೋರಿಕೆಯೇ ಉಡಾವಣೆಯ ಮುಂದೂಡಿಕೆಗೆ ಕಾರಣ ಎಂದು ಊಹಿಸಲಾಗಿದೆ. ಆದರೆ, ಇದನ್ನು ಪರಿಶೀಲಿಸಲಾಗುತ್ತಿದೆ.

ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು. ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top