fbpx
ಸಮಾಚಾರ

ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಪ್ರಧಾನಿ ಮಗ.

ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ನಿನ್ನೆಯಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ಅವರು ಇಂದು ಬಿಜೆಪಿ ಸೇರಿದ್ದಾರೆ.

 

 

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ, ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಅವರ ಸಮ್ಮುಖದಲ್ಲಿ ನೀರಜ್ ಶೇಖರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನೀರಜ್ ಶೇಖರ್ (50ವರ್ಷ) ಅವರ ಅವಧಿ ಮುಂದಿನ ವರ್ಷ ಅಂತ್ಯಗೊಳ್ಳಲಿದೆ. ಮೂಲಗಳ ಪ್ರಕಾರ, ನೀರಜ್ ಅವರನ್ನು ಬಿಜೆಪಿ ಉತ್ತರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.

ಅಂದಹಾಗೆ 2007ರಲ್ಲಿ ನೀರಜ್ ಶೇಖರ್ ತಮ್ಮ ತಂದೆ ಚಂದ್ರಶೇಖರ್ ಅವರ ಕ್ಷೇತ್ರವಾದ ಬಲ್ಲಿಯಾದಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2009ರಲ್ಲಿಯೂ ಪುನರಾಯ್ಕೆಗೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top