fbpx
ಸಮಾಚಾರ

ಭಾರತಕ್ಕೆ ಜಾಗತಿಕ ಜಯ- ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿದಿಸಿದ್ದ ಮರಣದಂಡನೆ ರದ್ದು.

ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದಲ್ಲಿ ವಿಧಿಸಲಾಗಿರುವ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದೆ. ಜೂಲೈ 17 ರಂದು ಐಸಿಜೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ಪಾಕಿಸ್ತಾನದಲ್ಲಿರುವ ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ಪಡೆಯುವುದಕ್ಕೆ ಅನುಮತಿ ನೀಡಿದೆ. ಐಸಿಜೆಯ ಈ ತೀರ್ಪು ಪಾಕ್ ವಿರುದ್ಧ ಭಾರತಕ್ಕೆ ಮಹತ್ವದ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ.

 

 

 

 

ಮಾಜಿ ನೌಕಾ ಅಧಿಕಾರಿ ಕುಲಭೂಷನ್‌ ಜಾಧವ್‌ಗೆ ಗೂಢಚಾರಿ ಹಾಗೂ ಉಗ್ರವಾದ ಆರೋಪದ ಮೇಲೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ (ಐಸಿಜೆ) ಭಾರತ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ಐಸಿಜೆಯ ಹೇಗ್‌ ಕೇಂದ್ರ ಕಚೇರಿಯಲ್ಲಿ ಫೆಬ್ರವರಿ 18ರಂದು ಆರಂಭಗೊಂಡಿತ್ತು. ಪ್ರಕರಣ ಇತ್ಯರ್ಥವಾಗುವವರೆಗೂ ಕುಲಭೂಷಣ್‌ ಜಾಧವ್‌ ಅವರನ್ನು ಗಲ್ಲಿಗೇರಿಸಬಾರದು ಎಂದು ಐಸಿಜೆ ಪಾಕಿಸ್ತಾನಕ್ಕೆ ಸೂಚಿಸಿತ್ತು.

ಈ ಪ್ರಕರಣದ ತೀರ್ಪು ಬರುವ ತನಕ ಕುಲಭೂಷಣ್ ಜಾಧವ್ ಮರಣದಂಡನೆ ಶಿಕ್ಷೆಯನ್ನು ಜಾರಿಗೆ ತರಬಾರದು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ ನೀಡಿತ್ತು. ಈ ಪ್ರಕರಣದ ವಿಚಾರಣೆಯನ್ನು ನೆದರ್ಲೆಂಡ್​ನ ಹೇಗ್ ಕೇಂದ್ರ ಕಚೇರಿಯಲ್ಲಿ ಫೆಬ್ರವರಿ ತಿಂಗಳಲ್ಲಿ ನ್ಯಾಯಾಲಯ ಕೈಗೆತ್ತಿಕೊಂಡಿತ್ತು. ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕು ಎಂದು ಐಸಿಜೆ ತೀರ್ಪು ನೀಡಿದೆ. ಅಲ್ಲದೇ ಪ್ರಕರಣದ ಸಂಪೂರ್ಣ ಮರುವಿಚಾರಣೆ ನಡೆಸಬೇಕೆಂದು ಐಸಿಜೆ ಪಾಕಿಸ್ತಾನಕ್ಕೆ ಸೂಚಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top