fbpx
ಸಮಾಚಾರ

ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ- 2 ಕೋಟಿ ನೆರವು ನೀಡಿ ಹೃದಯ ವೈಶಾಲ್ಯತೆ ಮೆರೆದ ಅಕ್ಷಯ್ ಕುಮಾರ್

ಥರ ಥರದ ಪಾತ್ರಗಳ ಮೂಲಕ, ಮನೋಜ್ಞ ಅಭಿನಯದ ಮೂಲಕ ಪ್ರಪಂಚದಾದ್ಯಂತ ಪ್ರೇಕ್ಷಕರ ಮನದಲ್ಲಿ ಅಚ್ಚರಿಯ ಮುದ್ರೆ ಒತ್ತಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇದೀಗ ಹೃದಯ ವೈಶಾಲ್ಯತೆ ತೋರುವ ಮೂಲಕ ಮನುಷ್ಯತ್ವ ಮೆರೆದಿದ್ದಾರೆ.

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂಗೆ ಬಾಲಿವುಡ್ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರು ಪ್ರವಾಹ ಪೀಡಿತ ಜನರಿಗೆ ಮತ್ತು ಕಾಜಿರಂಗ ಉದ್ಯಾನವನಕ್ಕೆ ತಲಾ 1 ಕೋಟಿ ರೂಪಾಯಿಯಂತೆ ಒಟ್ಟು 2 ಕೋಟಿ ರೂ. ಸಹಾಯ ಧನವನ್ನು ನೀಡಲು ಮುಂದಾಗಿದ್ದಾರೆ.

ಈಗ ತಮ್ಮ ಟ್ವಿಟ್ಟರ್ ನಲ್ಲಿ ಘೋಷಿಸಿಕೊಂಡಿರುವ ಅಕ್ಷಯ್ ಕುಮಾರ್ ‘ಅಸ್ಸಾಂನಲ್ಲಿನ ಪ್ರವಾಹದಿಂದ ಉಂಟಾದ ವಿನಾಶ ನಿಜಕ್ಕೂಹೃದಯ ವಿದ್ರಾವಕವಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಪೀಡಿತ, ಮಾನವರು ಅಥವಾ ಪ್ರಾಣಿಗಳು, ಈ ಸಂಕಷ್ಟದ ಸಮಯದಲ್ಲಿ ಬೆಂಬಲಕ್ಕೆ ಅರ್ಹ. ಆದ್ದರಿಂದ ನಾನು ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಕಾಜಿರಂಗ ಪಾರ್ಕ್ ಪಾರುಗಾಣಿಕಾಕ್ಕೆ ತಲಾ ಒಂದು ಕೋಟಿ ದಾನ ಮಾಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಅಲ್ಲದೆ ಪ್ರತಿಯೊಬ್ಬರೂ ಇಂತಹ ಸಂಕಷ್ಟದ ಸಮಯದಲ್ಲಿ ನೆರವಿನ ಸಹಾಯ ಹಸ್ತಚಾಚಲು ಅವರು ಮನವಿ ಮಾಡಿಕೊಂಡಿದ್ದಾರೆ.

ಅಂದಹಾಗೆ ಬ್ರಹ್ಮಪುತ್ರ ನದಿಯ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಭೂಕುಸಿತವಾಗಿ ಈವೆರೆಗೆ 15 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ಪ್ರವಾಹದಿಂದ 46 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿದ್ದಾರೆ. ಕಾಜಿರಂಗದಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಾಣಿಗಳ ಮೇಲೆ ಪ್ರವಾಹ ಪರಿಣಾಮ ಬೀರಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top