fbpx
ಸಮಾಚಾರ

ಪ್ರವಾಹಕ್ಕೆ ಅಸ್ಸಾಂ ತತ್ತರ- ಅರ್ಧ ತಿಂಗಳ ಸಂಬಳ ನೆರವು ನೀಡಿ ಮಾನವೀಯತೆ ಮೆರೆದ ಹಿಮಾ ದಾಸ್.

ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಅಸ್ಸಾಂನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ತಮ್ಮ ಒಂದು ತಿಂಗಳ ಸಂಬಳವನ್ನು ಅರ್ಧದಷ್ಟು ದಾನ ಮಾಡಿದ್ದಾರೆ. ಅಲ್ಲದೆ ನನ್ನ ಅಸ್ಸಾಂನನ್ನು ಸಹಾಯ ಮಾಡಲು ಮುಂದೆ ಬನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

 

ಟ್ವೀಟರ್‌ನಲ್ಲಿ ಈ ವಿಷಯ ಹಂಚಿಕೊಂಡಿರುವ ಹಿಮಾ, ಕಾರ್ಪೋರೇಟ್‌ ಸಂಸ್ಥೆ ಹಾಗೂ ವೈಯಕ್ತಿಕವಾಗಿ ಪ್ರತಿಯೊಬ್ಬರೂ ನೆರವು ನೀಡುವಂತೆ ಕೋರಿದ್ದಾರೆ. ಹಿಮಾ, ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿದ್ದಾರೆ. ಯುವ ಅಥ್ಲೀಟ್‌ನ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಅಂದಹಾಗೆ ಬ್ರಹ್ಮಪುತ್ರ ನದಿಯ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಭೂಕುಸಿತವಾಗಿ ಈವೆರೆಗೆ 15 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ಪ್ರವಾಹದಿಂದ 46 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿದ್ದಾರೆ. ಕಾಜಿರಂಗದಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಾಣಿಗಳ ಮೇಲೆ ಪ್ರವಾಹ ಪರಿಣಾಮ ಬೀರಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top