fbpx
ಸಮಾಚಾರ

ವೃಂದಾವನ ಪುನರ್ ನಿರ್ಮಾಣ ಕಾರ್ಯ ಆರಂಭ.

ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನದಲ್ಲಿ ಶ್ರೀ ವ್ಯಾಸರಾಜತೀರ್ಥರ ವೃಂದಾವನ ಧ್ವಂಸಗೊಂಡ ಸ್ಥಳದಲ್ಲೇ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಧಾರ್ಮಿಕ ವಿಧಿ ವಿಧಾನಗಳಾದ ಹೋಮ, ಮಂತ್ರ ಪಠಣಗಳ ಮೂಲಕ ಪುನರ್ ಪ್ರತಿಷ್ಠಾಪನಾ ಕಾರ್ಯ ಸಾಗಿದೆ.ಶೇ 25 ರಷ್ಟು ಪೂರ್ಣಗೊಂಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ವೃಂದಾವನ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ನವವೃಂದಾವನಕ್ಕೆ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಭೇಟಿ ನೀಡಿ, ವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಿದ್ದಾರೆ. ಈ ವೇಳೆ ನವವೃಂದಾವನ ಧ್ವಂಸದ ಬಗ್ಗೆ ಬೇಸರ ವ್ಯಕ್ತಪಡಿಸಿ, ನವವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಭಕ್ತರೊಂದಿಗೆ ಶ್ರೀಗಳು ಚರ್ಚೆ ನಡೆಸಿದ್ದಾರೆ.

ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ವೃಂದಾವನದ ಕೆಳಭಾಗ ಸಂಪೂರ್ಣ ಅಗೆಯಲಾಗಿದೆ. ದುಷ್ಕರ್ಮಿಗಳು ನಿಧಿಯಾಸೆಗೆ ವೃಂದಾವನ ಆಗೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top