fbpx
ಸಮಾಚಾರ

‘ಯಡಿಯೂರಪ್ಪರನ್ನು ಇಳಿಸಲು ಬಿಜೆಪಿ ಸಂಸದರಿಂದಲೇ ಕುತಂತ್ರ’

ಉತ್ತರ ಕರ್ನಾಟಕ ಪ್ರವಾಹ ಪರಿಹಾರದ ಬಗ್ಗೆ ನಾನು ಮಾತನಾಡದೆ ಇದ್ದಿದ್ದರೇ 15 ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿರುತ್ತಿದ್ದರು” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಯಾತ್ನಾಳ್, ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ಪ್ರಧಾನಿ ಭೇಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಯಡಿಯೂರಪ್ಪ ಭೇಟಿಗೆ ಅವಕಾಶ ನಿರಾಕರಿಸಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ರಾಜೀನಾಮೆಗೆ ಕೇಂದ್ರದಲ್ಲಿ ಇಬ್ಬರು ಸಂಸದರು ಒತ್ತಡ ಹೇರಿದ್ದಾರೆ. ನಾನು ಪರಿಹಾರದ ಕುರಿತು ಹೇಳಿಕೆ ನೀಡಿದ ಬಳಿಕ ಅವರು ದೆಹಲಿಗೆ ಹೋಗಿದ್ದರು. ಆದರೆ ಕೇಂದ್ರದಿಂದ ಪರಿಹಾರ ತರಲು ಅಲ್ಲ. ಅವರು ಹೋದ ಬಳಿಕ ನನಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇಂತಹ ಚಾಡಿಕೋರ ಸಂಸದರಿಂದಾಗಿ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.

ಪಕ್ಷದ ವಿರುದ್ಧ ಹೇಳಿಕೆ ಕೊಟ್ಟ ಕಾರಣಕ್ಕಾಗಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿದ ನೋಟಿಸ್ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಶಿಸ್ತು ಉಲ್ಲಂಘಿಸದ ನಾನು ನೋಟಿಸ್‌ಗೆ ಉತ್ತರ ನೀಡುವುದಿಲ್ಲ. ಬದಲಾಗಿ, ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.‌ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top