fbpx
ಸಮಾಚಾರ

ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ: ಗುಜರಾತ್ ಶಾಲಾ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ನಾಥೂರಾಂ ಗೋಡ್ಸೆ ಗುಂಡಿಗೆ ಬಲಿಯಾದರು ಎಂಬುದು ಎಲ್ಲರಿಗೂ ಗೊತ್ತಿರುವ ಮಾಹಿತಿ. ಆದರೆ ಗುಜರಾತ್‌ನ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಆಂತರಿಕ ಪರೀಕ್ಷೆ ವೇಳೆ, ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎಂಬ ಆಘಾತಕಾರಿ ಪ್ರಶ್ನೆಯೊಂದನ್ನು ಕೇಳಲಾಗಿದೆ.

ಗಾಂಧಿನಗರದಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆ ‘ಸುಫಲಾಂ ಶಾಲಾ ವಿಕಾಸ ಸಂಕುಲ’ದ ಅಧೀನದಲ್ಲಿನ ಶಾಲೆಯಲ್ಲಿ ಗುಜರಾತಿ ಭಾಷೆಯ 9ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆಯನ್ನು ಕೇಳಲಾಗಿದೆ. ಇಂಟರ್ನಲ್ ಅಸಿಸ್ಮೆಂಟ್ ಪರೀಕ್ಷೆಯಲ್ಲಿ ಈ ಪ್ರಶ್ನೆಯನ್ನು ಕೇಳಲಾಗಿದ್ದು, ಈ ಪ್ರಶ್ನೆಯನ್ನು ನೋಡಿ ಕೆಲ ಶಿಕ್ಷಕರು ಹಾಗೂ ಶಿಕ್ಷಣಾಧಿಕಾರಿಗಳು ತಬ್ಬಿಬ್ಬಾಗಿ ಹೋಗಿದ್ದಾರೆ.

ಇನ್ನು ಇದೇ ಶಾಲೆಯ 12ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾದ ಪ್ರಶ್ನೆ ಹೀಗಿದೆ- ನಿಮ್ಮ ಪ್ರದೇಶದಲ್ಲಿ ಮದ್ಯ ಮಾರಾಟ ಹೆಚ್ಚುತ್ತಿರುವ ಬಗ್ಗೆ ಮತ್ತು ಅಕ್ರಮ ಮಾರಾಟಗಾರ ಉಪದ್ರವ ಬಗ್ಗೆ ಜಿಲ್ಲಾ ಪೊಲೀಸ್ ಅಧಿಕಾರಿಗೆ ಪತ್ರ ಬರೆಯಿರಿ ಎಂದಿದೆ.

ಶನಿವಾರ ನಡೆದ ಪರೀಕ್ಷೆಯಲ್ಲಿ ಈ ಪ್ರಶ್ನೆ ಕೇಳಲಾಗಿದ್ದು ಇವೆರಡೂ ಆಕ್ಷೇಪಾರ್ಹವಾದುದು. ಈ ಬಗ್ಗೆ ನಾವು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಗಾಂಧೀನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭರತ್ ವಧೇರ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top