fbpx
ಸಮಾಚಾರ

“ಮೋದಿ ಸರಕಾರಕ್ಕೆ ಸ್ಪಷ್ಟವಾದ ಆರ್ಥಿಕ ನೀತಿ ಇಲ್ಲ” ನಿರ್ಮಲ ಸೀತಾರಾಮನ್ ಗಂಡ ಟೀಕೆ.

ಆರ್ಥಿಕ ತಜ್ಞ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗಂಡ ಪರಾಕಲ ಪ್ರಭಾಕರ್ ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಸೂಕ್ತ ನೀತಿ ಜಾರಿಗೊಳಿಸುವಲ್ಲಿ ವಿಫಲಗೊಂಡಿದೆ ಎಂದು ಕಿಡಿ ಕಾರಿರುವ ಪ್ರಭಾಕರ್, ಸರ್ಕಾರ ಇನ್ನಾದರೂ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಈ ಬಗ್ಗೆ ಪರಾಕಲ ಪ್ರಭಾಕರ್ ಅವರು ದೈನಿಕವೊಂದಕ್ಕೆ ಅಂಕಣವನ್ನು ಬರೆದಿದ್ದು, ಭಾರತದ ಆರ್ಥಿಕ ಸ್ಥತಿ ಗಣನೀಯವಾಗಿ ಕುಸಿತ ಕಂಡಿದೆ. ಸರಕಾರವು ನಿರಾಕರಣೆಯ ನೀತಿಯನ್ನು ಅನುಸರಿಸುತ್ತಿದೆ. ಸರಕಾರ ಇದನ್ನು ಎಷ್ಟೇ ಅಲ್ಲಗಳೆದರೂ ಅಂಕಿ ಅಂಶವನ್ನು ಮುಚ್ಚಿಡಲು ಸಾಧ್ಯವಿಲ್ಲ. ಹಣದ ಕೊರತೆಯಿಂದ ಹಲವಾರು ಕ್ಷೇತ್ರಗಳು ಸಂಕಷ್ಟದಲ್ಲಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಮಂದಗತಿಯ ಆರ್ಥಿಕ ಬೆಳವಣಿಗೆಗೆ ವೇಗೋತ್ಕರ್ಷ ಕಲ್ಪಿಸಲು ಕೇಂದ್ರ ಸರ್ಕಾರ ಇತ್ತೀಚಿಗೆ ಕಾರ್ಪೊರೇಟ್ ತೆರಿಗೆ ತಗ್ಗಿಸುವ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರ ಏನೇ ಪ್ರೋತ್ಸಾಹಕ ಕ್ರಮ ಘೋಷಿಸಿದರೂ, ಆರ್ಥಿಕತೆ ಚೇತರಿಸಿಕೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದಾಗಿ ಅಂತರರಾಷ್ಟ್ರೀಯ ಕಂಪನಿಗಳು ಭಾರತ ಬೆಳವಣಿಗೆ ದರವನ್ನು ತಗ್ಗಿಸಿವೆ ಎಂದು ಹೇಳಿದ್ದಾರೆ.

ಇನ್ನು ಈ ಸಂಬಂಧ ಮೋದಿ ಸರ್ಕಾರಕ್ಕೆ ಕಿವಿ ಮಾತು ಹೇಳಿರುವ ಪ್ರಭಾಕರ್ ‘ಬಿಜೆಪಿ ನೆಹರೂ ಸರ್ಕಾರವನ್ನು ದೂಷಿಸುವುದನ್ನು ನಿಲ್ಲಿಸಿ. ಬದಲಾಗಿ ನರಸಿಂಹ ರಾವ್ ಹಾಗೂ ಮನಮೋಹನ್ ಸಿಂಗ್ ಸರ್ಕಾರ ರೂಪಿಸಿಸದ್ದ ಆರ್ಥಿಕ ಮಾದರಿ ಅಂದರೆ ಉದಾರೀಕರಣವನ್ನು ಅಳವಡಿಸಿಕೊಳ್ಳಬೇಕು’ ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top