fbpx
ಸಮಾಚಾರ

ಡಿಸೆಂಬರ್ 5ರಂದು ಸರ್ಕಾರಿ ರಜೆ: ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ.

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಡಿಸೆಂಬರ್ 5ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಯಲ್ಲಿ ಅಂದು ಆಯಾ 15 ಕ್ಷೇತ್ರಗಳ ವ್ಯಾಪ್ತಿಗೆ ಬರುವ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಅಂದು ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಕೇಂದ್ರ ಸರ್ಕಾರಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರು, ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸುವಂತೆ ತಿಳಿಸಲಾಗಿದೆ.

ಅಥಣಿ, ಕಾಗವಾಡ, ಗೋಕಾಕ್, ಯೆಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷ್ಮೀ ಬಡಾವಣೆ, ಶಿವಾಜಿನಗರ, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರು, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾರ್ಮಿಕರಿಗೆ ವೇತನ ಸಹಿತ ರಜೆ ಸಿಗಲಿದೆ.

ಉಳಿದಂತೆ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಹೊರುತುಪಡಿಸಿ ಉಳಿದೆಲ್ಲಾ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಣೆಯಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top