fbpx
ಸಮಾಚಾರ

ರಾತ್ರಿ ಕರ್ನಾಟಕಕ್ಕೆ ಟ್ರೋಫಿ ಗೆದ್ದುಕೊಟ್ಟು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ!

ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿದೆ. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದಾರೆ. ರಾತ್ರಿ ಕರ್ನಾಟಕಕ್ಕೆ ಟ್ರೋಫಿ ಗೆದ್ದುಕೊಟ್ಟ ಮನೀಶ್ ಪಾಂಡೆ ಮರುದಿನ ಬೆಳಿಗ್ಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ರಿಕೆಟಿಗ ಮನೀಶ್ ಪಾಂಡೆ ಇಂದು ತುಳು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ಆಶ್ರಿತಾ ಶೆಟ್ಟಿ ಅವರ ಜೊತೆ ವಿವಾಹವಾಗಿದ್ದಾರೆ. ಮದುವೆಯ ಆಚರಣೆ ಎರಡು ದಿನಗಳ ಕಾಲ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದಾರೆ.

ಐಪಿಎಲ್‍ನಲ್ಲಿ ಮನೀಶ್ ಪಾಂಡೆ ಅವರು ಸ್ಯಾನ್ ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಅಧಿಕೃತ ಇನ್‍ಸ್ಟಾಗ್ರಾಂ ಪೇಜ್ ನಲ್ಲಿ ಹಂಚಿಕೊಂಡಿದೆ.

ಇನ್ನು 30 ವರ್ಷ ವಯಸ್ಸಿನ ಮನೀಶ್ ಹಾಗೂ ಆಶ್ರಿತಾ ಅನೇಕ ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಹಿಂದೆ ಮನೀಶ್ ಪಾಂಡೆ ಹಾಗೂ ಆಶ್ರಿತಾ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ.

ಆಶ್ರಿತಾ ಶೆಟ್ಟಿ ಯಾರು?
ಮುಂಬೈ ಮೂಲದ ನಟಿ, ರೂಪದರ್ಶಿ ಆಗಿರುವ ಆಶ್ರಿತಾ ಶೆಟ್ಟಿ 2012ರಲ್ಲಿ ತೆಲಿಕೆದ ಬೊಳ್ಳಿ ತುಳ್ಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲರಿಸಿದ್ದರು. ಅಲ್ಲಿಂದ ಬಳಿಕ ಟಾಲಿವುಡ್ ಚಿತ್ರರಂಗವನ್ನು ಪ್ರವೇಶಿಸಿರುವ ಆಶ್ರಿತಾ ಶೆಟ್ಟಿ ನಾಲ್ಕು ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಉದಯಂ ಎನ್‌ಎಚ್ 4 (2013), ಒರು ಕನ್ನಿಯುಂ ಮೂನು ಕಲವಾನಿಕಲುಂ (2014) ಹಾಗೂ ಇಂದ್ರಜಿತ್ (2017) ಚಿತ್ರಗಳಾಗಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top