fbpx
ಸಮಾಚಾರ

ರೈಲ್ವೆಯಲ್ಲಿ ನೇಮಕಾತಿ: 3585 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ದಕ್ಷಿಣ ರೈಲ್ವೆ ವಲಯದಲ್ಲಿ 3585 ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು, ವಿವಿಧ ಟ್ರೇಡ್‌ಗಳ ಅಡಿಯಲ್ಲಿ ನೇಮಕಾತಿ ಮಾಡಲು ನೋಟಿಫಿಕೇಶನ್‌ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31,2019ರ ಸಂಜೆ 5 ಗಂಟೆಯೊಳಗೆ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:
ಅಪ್ರೆಂಟಿಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ/10+2 ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಹುದ್ದೆಗಳಿಗನುಸಾರ ಕನಿಷ್ಟ 15 ರಿಂದ ಗರಿಷ್ಟ 22/24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಕ್ಷಿಣ ರೈಲ್ವೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಇರಲಿದೆ.

ಅರ್ಜಿ ಶುಲ್ಕ:
ಅರ್ಜಿದಾರರು 100 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಮತ್ತು ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top