fbpx
ಸಮಾಚಾರ

ದ್ವೀಪ ಖರೀದಿಸಿ ಹೊಸ ದೇಶವನ್ನೇ ಕಟ್ಟಿದ ನಿತ್ಯಾನಂದ: ಪ್ರತ್ಯೇಕ ಧ್ವಜ, ಲಾಂಛನ, ಪಾಸ್‌ಪೋರ್ಟ್‌, ಕ್ಯಾಬಿನೆಟ್ ರಚನೆ, ಪ್ರಧಾನಿ ಆಯ್ಕೆ

ಇತ್ತೀಚಿಗಷ್ಟೇ ದೇಶ ತೊರೆದ ಅತ್ಯಾಚಾರ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಈಗ ಅಮೆರಿಕದಲ್ಲಿ ಖಾಸಗಿ ದ್ವೀಪವೊಂದನ್ನು ಖರೀದಿಸಿ ಅಲ್ಲಿ ಹೊಸ ದೇಶವನ್ನೇ ಕಟ್ಟಲು ಹೊರಟಿದ್ದಾರೆ.

ಈಕ್ವೆಡಾರ್ ನಲ್ಲಿ ಖಾಸಗಿ ಹಿಮಪ್ರದೇಶವನ್ನು ಖರೀದಿಸಿದ್ದು, ಇದು ತನ್ನ ದೇಶ ಎಂಬಂತೆ ಬಿಂಬಿಸುತ್ತಿದ್ದಾನೆ. ಅಲ್ಲದೆ ಇದಕ್ಕಾಗಿ ಈಗಾಗಲೇ ಧ್ವಜ, ಲಾಂಛನ, ಪಾಸ್‌ಪೋರ್ಟ್‌‌‌‌ಗಳನ್ನು ಸಹ ಸಿದ್ಧಪಡಿಸಿದ್ದು, ಈ ದೇಶಕ್ಕೆ ಕೈಲಾಸ ಎಂದು ಹೆಸರಿಟ್ಟಿದ್ದಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇದು ಹಿಂದೂ ದೇಶ ಎಂದು ನಿತ್ಯಾನಂದ ಘೋಷಣೆ ಮಾಡಿದ್ದಾರೆ. ಈ ದೇಶಕ್ಕೆ ದೇಣಿಕೆ ನೀಡುವಂತೆಯೂ ಪ್ರಕಟಣೆ ನೀಡಲಾಗಿದೆ ಎಂದು ತಿಳಿದುಬಂದಿದೆ.

www.kailaasa.org ಎಂಬ ವೆಬ್‌ಸೈಟ್‌ ಕೂಡ ಆರಂಭಿಸಲಾಗಿದ್ದು, ಇದರಲ್ಲಿ ಸಂಪೂರ್ಣ ವಿವರವನ್ನು ನೀಡಲಾಗಿದೆ. ಇದರಲ್ಲಿ ಕೈಲಾಸದ ಉದ್ದೇಶ ಏನು ಎಂಬುದನ್ನೂ ನಿತ್ಯಾನಂದ ಬರೆದುಕೊಂಡಿದ್ದಾರೆ. ಈ ಪ್ರತ್ಯೇಕ ದೇಶಕ್ಕಾಗಿ ನಿತ್ಯಾನಂದ ಪ್ರತ್ಯೇಕ ಪಾಸ್‌ಪೋರ್ಟ್‌ ಕೂಡ ಮಾಡಲು ಹೊರಟಿದ್ದಾರೆ. ದೇಶದಲ್ಲಿ ಪ್ರತ್ಯೇಕ ಸಚಿವ ಸಂಪುಟವನ್ನೇ ರಚಿಸಲಾಗಿದೆ.

ಕೈಲಾಸದ ಪಾಸ್‍ಪೋರ್ಟಿನ ಎರಡು ಮಾದರಿಗಳು ಅಂತಿಮವಾಗಿದ್ದು, ಒಂದು ಬಂಗಾರದ ಬಣ್ಣದ್ದಾಗಿದ್ದರೆ, ಇನ್ನೊಂದು ಕೆಂಪು ಬಣ್ಣದ್ದಾಗಿದೆ. ದೇಶದ ಧ್ವಜವು ಮೆರೂನ್ ಬಣ್ಣದ್ದಾಗಿದೆ. ಇದರಲ್ಲಿ ಎರಡು ಲಾಂಚನಗಳಿದ್ದು, ಒಂದು ನಿತ್ಯಾನಂದ ಹಾಗೂ ಇನ್ನೊಂದು ನಂದಿಯ ಚಿತ್ರವಾಗಿದೆ.

ನಿತ್ಯಾನಂದ ಸಚಿವ ಸಂಪುಟವನ್ನು ಸಹ ರಚಿಸಿದ್ದು, ಮಾ ಎಂಬ ಹೆಸರಿನವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾನೆ. ಅಲ್ಲದೆ ಈ ದೇಶದಲ್ಲಿ ನಿತ್ಯಾನಂದ ಪ್ರತಿ ದಿನ ಸಚಿವ ಸಂಪುಟ ಸಭೆ ನಡೆಸುತ್ತಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಜಾಗವನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಘೋಷಣೆ ಮಾಡಬೇಕೆಂದು ವಿಶ್ವಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಕಾನೂನು ತಂಡ ತಯಾರಿ ಮಾಡಿಕೊಂಡಿದೆ. ಈ ಅರ್ಜಿಯಲ್ಲಿ ಭಾರತದಲ್ಲಿ ನನಗೆ ಬೆದರಿಕೆ ಇದೆ. ಹೀಗಾಗಿ ಇಲ್ಲಿ ನೆಲೆಸಲು ಅವಕಾಶ ನೀಡುವಂತೆ ಕೇಳಿಕೊಳ್ಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top