fbpx
ಸಮಾಚಾರ

ಪ್ರಧಾನಿ ಮೋದಿ ನಿವಾಸದಲ್ಲಿ ಅಗ್ನಿ ಅವಘಡ

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಬೆಂಕಿ ಅವಘಡ ಸಂಭವಿಸಿದ ವರದಿಯಾಗಿದೆ. ದೆಹಲಿಯ ಲೋಕಕಲ್ಯಾಣ ಮಾರ್ಗದ ಪ್ರಧಾನಿ ಅವರ ಅಧಿಕೃತ ನಿವಾಸದ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು ನಿಯಂತ್ರಣಕ್ಕೆ ತರಲಾಗಿದೆ.

#UPDATE Delhi: The minor fire that broke out at Prime Minister’s residence at 7 Lok Kalyan Marg, is under control now. pic.twitter.com/sARPlEud7k— ANI (@ANI) December 30, 2019

ರಾತ್ರಿ 7:25ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಬಂದಿದ್ದು, 9 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸಂಜೆ 7:55ರ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ತರಲು ಸಾಧ್ಯವಾಗಿದ್ದು, ಯಾವುದೇ ಸಾವು, ನೋವು ಹಾಗೂ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಬೆಂಕಿ ಅವಘಡದ ಬಗ್ಗೆ ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಅವಘಡವು ಪ್ರಧಾನಿ ಕಚೇರಿಯ ಅಥವಾ ನಿವಾಸದ ಆವರಣದಲ್ಲಿ ಸಂಭವಿಸಿಲ್ಲ ಎಂದು ತಿಳಿಸಿದೆ. ಬೆಂಕಿ ಕಾಣಿಸಿದ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡು ಬಂದಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top