fbpx
ಸಮಾಚಾರ

ಶ್ರೀಮನ್ನಾರಾಯಣ ಚಿತ್ರಕ್ಕೆ ಅಡ್ಡಿಪಡಿಸಿ ಜೈ ಶಿವಾಜಿ ಘೋಷಣೆ ಕೂಗಿದ ಶಿವಸೇನೆ ಗೂಂಡಾಗಳು: ಕನ್ನಡ ನಾಮಫಲಕಕ್ಕೆ ಮಸಿ.

ಕೊಲ್ಲಾಪುರದಲ್ಲಿಭಾನುವಾರ ಶಿವಸೇನೆ ಕಾರ್ಯಕರ್ತರು ‘ಅವನೇ ಶ್ರೀಮನ್ನಾರಾಯಣ’ ಕನ್ನಡ ಚಿತ್ರ ಪ್ರದರ್ಶನ ನಡೆಯುತ್ತಿದ್ದ ಚಿತ್ರ ಮಂದಿರಕ್ಕೆ ಮುತ್ತಿಗೆ ಹಾಕಿ ಪ್ರದರ್ಶನ ನಿಲ್ಲಿಸಿದ್ದಾರೆ.

ಮೊದಲ ಪ್ರದರ್ಶನ ಆರಂಭವಾಗುತ್ತಿದ್ದಂತೆಯೇ ‘ಅಪ್ಸರಾ’ ಚಿತ್ರಮಂದಿರಕ್ಕೆ ನುಗ್ಗಿದ ಕಾರ್ಯಕರ್ತರು ಕನ್ನಡ ಚಿತ್ರದ ಪೋಸ್ಟರ್‌ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಚಿತ್ರಮಂದಿರದ ಮಾಲೀಕ ಚಲನಚಿತ್ರ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರ ಹಣ ಮರಳಿಸಿ ಇಡೀ ದಿನ ಚಿತ್ರ ಪ್ರದರ್ಶನ ನಿಲ್ಲಿಸಿದ್ದಾರೆ.

ಚಿತ್ರಮಂದಿರಕ್ಕೆ ಅಷ್ಟೇ ಅಲ್ಲದೇ ಕನ್ನಡದಲ್ಲಿ ಮುದ್ರಿಸಿದ್ದ ಫಲಕಗಳಿಗೆ ಶಿವಸೇನೆಯ ಪುಂಡರು ಕಪ್ಪು ಮಸಿ ಬಳಿದಿದ್ದಾರೆ. ಇಂದು ಕೂಡ ಮಹಾರಾಷ್ಟ್ರದಲ್ಲಿ ಶಿವಸೇನೆಯ ಪುಂಡರು ಪ್ರತಿಭಟನೆ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿಯಲ್ಲಿ ಶಿವಸೇನೆಯ ಪುಂಡಾಟಿಕೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

ಇಂದು ಕೂಡ ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿ ಬಿಗುವಿನ ವಾತಾವರಣವಿದ್ದು, ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬಸ್ ಸಂಚಾರ ರಾತ್ರಿಯಿಂದ ಆರಂಭವಾಗಿದ್ದರು ಯಾವುದೇ ಅಹಿತಕರ ಘಟನೆ ನಡೆದರೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುವದು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಇಷ್ಟು ದಿನ ತನ್ನಗಾಗಿದ್ದ ಭಾಷಾ ವಿವಾದ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಮತ್ತೆ ಶಿವಸೇನೆ ಭಾಷಾ ವಿವಾದ ಕೆಣಕಿದೆ. ಸದ್ಯ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈಗಲೂ ಸಹ ಸಾರಿಗೆ ವ್ಯವಸ್ಥೆ ಬಂದ್ ಆಗಿದೆ. ಮುಂದೇನು ಅನ್ನೊದನ್ನ ಕಾದು ನೋಡಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top