fbpx
ಸಮಾಚಾರ

ರಾತ್ರಿ 2ರವೆರೆಗೆ ಮದ್ಯ ಮಾರಾಟ, ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಕೊಡ್ತೀವಿ, – ಅಬಕಾರಿ ಸಚಿವ ನಾಗೇಶ್

ಮನೆ ಬಾಗಿಲಿಗೆ ಮದ್ಯ ಡೆಲಿವರಿ ಮಾಡ್ತೀನಿ ಎಂದು ವಿವಾದಕ್ಕೆ ಗುರಿಯಾಗಿದ್ದ ರಾಜ್ಯದ ಅಬಕಾರಿ ಸಚಿವ ಈಗ ಮತ್ತೊಂದು ವಿವಾದಕ್ಕೆ ಗುರಿಯಾಗ್ತಿದ್ದಾರೆ. ಅಬಕಾರಿ ಸಚಿವ ನಾಗೇಶ್ ವರ್ಷದ ಕಡೆ ದಿನ ಮತ್ತೊಂದು ವಿವಾದಾತ್ಮಕ ಹೆಜ್ಜೆ ಇಟ್ಟಿದ್ದಾರೆ. ಬಡವರಿಗೆ ಮದ್ಯವನ್ನು ಸಬ್ಸಿಡಿ ದರದಲ್ಲಿ ಸರ್ಕಾರ ಕೊಡಲು ಚಿಂತಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾನ್ಯವಾಗಿ ವೈನ್ ಶಾಪ್ ಗಳು ರಾತ್ರಿ 11 ಗಂಟೆವರಗೆ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಗಳು ಮಧ್ಯರಾತ್ರಿ 2ಗಂಟೆಯವರೆಗೆ ತೆರೆದಿರುತ್ತವೆ. ಹೊಸ ವರ್ಷದ ದಿನದಂದು ಮದ್ಯ ಮಾರಾಟದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಅಂದರೆ, ಮಧ್ಯರಾತ್ರಿ 2 ಗಂಟೆವರಗೆ ಅವಕಾಶ ಕೊಡಲು ಗೃಹ ಇಲಾಖೆ ಕೂಡ ಸಮ್ಮತಿಸಿದೆ ಎಂದು ಹೇಳಿದರು.

ಬಡ ಜನರು ಹೆಚ್ಚು ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿ ದರದಲ್ಲಿ ಕೊಡಬೇಕಂದು ಸರ್ಕಾರದ ಚಿಂತನೆ ಇದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಈ ಮೂಲಕ ಬಡ ಜನರ ಆರೋಗ್ಯ ಕೂಡ ಹದಗೆಡದಂತೆ ಕಾಪಾಡಬಹುದು ಎಂದು ಅವರು ತಿಳಿಸಿದರು. ಸಾಮಾನ್ಯವಾಗಿ ಕೂಲಿ ಕಾರ್ಮಿಕರು ಅಗ್ಗದ ಮದ್ಯವನ್ನು ಕುಡಿಯುತ್ತಾರೆ. ಅದರಿಂದ ಕರುಳು ಸಂಬಂಧಿ ಖಾಯಿಲೆಗೆ ತುತ್ತಾಗಿ ಸಾಯುವವರ ಸಂಖ್ಯೆ ಹೆಚ್ಚಿದೆ.

ಪ್ರತಿದಿನವೂ ವೀಕೆಂಡ್​:
ಈವರೆಗೆ ರಾತ್ರಿ 11 ಗಂಟೆಯವರೆಗೆ ಬಾರ್​ಗಳು ಕಾರ್ಯ ನಿರ್ವಹಿಸಲು ಸರ್ಕಾರ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಶುಕ್ರವಾರ ಮತ್ತು ಶನಿವಾರ ರಾತ್ರಿ 1 ಗಂಟೆಯವರೆಗೂ ಬಾರ್​ ಮತ್ತು ರೆಸ್ಟೋರೆಂಟ್​ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಅದರಂತೆ ಈಗಲೂ ವೀಕೆಂಡ್​ನಲ್ಲಿ ಬಾರ್​ ಮತ್ತು ರೆಸ್ಟೋರೆಂಟ್​ಗಳು ಹೆಚ್ಚಿನ ಸಮಯ ತೆರೆದಿರುತ್ತವೆ.ಇದೀಗ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿರುವ ಅಬಕಾರಿ ಸಚಿವ ನಾಗೇಶ್​, ಪ್ರತಿನಿತ್ಯ ಮಧ್ಯರಾತ್ರಿ 2 ಗಂಟೆಯವರೆಗೆ ಮದ್ಯ ಮಾರಾಟ ಮಾಡಲಾಗುವುದು ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top