fbpx
ಸಮಾಚಾರ

2020 ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ಕೊಟ್ಟ ರೈಲ್ವೆ ಇಲಾಖೆ: ಪ್ರಯಾಣ ದರ ಇನ್ನು ದುಬಾರಿ

ರೈಲು ಪ್ರಯಾಣದ ದರ ಹೆಚ್ಚಳ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ಪರಿಷ್ಕೃತ ದರ ಜನವರಿ 1ರಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಉಪನಗರ ರೈಲು ಪ್ರಯಾಣ ದರದಲ್ಲಿ ಬದಲಾವಣೆ ಇಲ್ಲ. ಆರ್ಡಿನರಿ ನಾನ್‌ ಎಸಿ, ಎಸಿ, ಶತಾಬ್ದಿ, ರಾಜಧಾನಿ, ತುರಂತ್ ರೈಲುಗಳಿಗೆ ದರ ಹೆಚ್ಚಳ ಅನ್ವಯವಾಗಲಿದೆ. ಟಿಕೆಟ್ ಕಾಯ್ದಿರಿಸುವಿಕೆ ಶುಲ್ಕದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಇಲಾಖೆ ತಿಳಿಸಿದೆ.

ಹವಾ ನಿಯಂತ್ರಿತವಲ್ಲದ ಸಾಮಾನ್ಯ ರೈಲುಗಳು ಮತ್ತು ಸಬ್ ಅರ್ಬನ್ ಅಲ್ಲದ ರೈಲುಗಳ ಪ್ರಯಾಣ ದರವನ್ನು ಪ್ರತಿ ಕಿ.ಮೀ.ಗೆ 1 ಪೈಸೆ ಹೆಚ್ಚಳ ಮಾಡಲಾಗಿದೆ. ಹವಾ ನಿಯಂತ್ರಿತವಲ್ಲದ ಎಕ್ಸ್‌ಪ್ರೆಸ್ ರೈಲುಗಳ ಪ್ರಯಾಣ ದರ ಪ್ರತಿ ಕಿ.ಮೀ.ಗೆ 2 ಪೈಸೆ ಹಾಗೂ ಹವಾನಿಯಂತ್ರಿತ ದರ್ಜೆ (ಎ.ಸಿ.) ಪ್ರಯಾಣ ದರವನ್ನು ಪ್ರತಿ ಕಿ.ಮೀ.ಗೆ 4 ಪೈಸೆ ಹೆಚ್ಚಳ ಮಾಡಲಾಗಿದೆ.

ಮಂಗಳವಾರ ಇಲಾಖೆ ಹೊರಡಿಸಿದ್ದ ಆದೇಶದಂತೆ ಸಾಮಾನ್ಯ, ನಾನ್ ಎಸಿ ರೈಲು ದರಗಳು ಪ್ರತಿ ಕಿ.ಮೀ ಪ್ರಯಾಣಕ್ಕೆ 1 ಪೈಸೆ ಏರಿಕೆಯಾಗಿದೆ. ರೈಲ್ವೆ ಮೇಲ್, ಎಕ್ಸ್ ಪ್ರೆಸ್, ಎಸಿ ರಹಿತ ರೈಲುಗಳ ದರದಲ್ಲಿ ಕಿಲೋ ಮೀಟರ್‌ಗೆ 2 ಪೈಸೆ ಹೆಚ್ಚಳ ಮತ್ತು ಎಸಿ ತರಗತಿಗಳ ದರದಲ್ಲಿ ಪ್ರತಿ ಕಿಲೋ ಮೀಟರ್‌ಗೆ 4 ಪೈಸೆ ಏರಿಕೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ.

ಪ್ರೀಮಿಯಂ ರೈಲುಗಳಾದ ಶತಾಬ್ದಿ, ರಾಜಧಾನಿ ಮತ್ತು ಡುರೊಂಟೊ ರೈಲುಗಳ ಶುಲ್ಕವೂ ಹೆಚ್ಚಳವಾಗಲಿದೆ. 1,447 ಕಿ.ಮೀ ದೂರ ಕ್ರಮಿಸುವ ದೆಹಲಿ-ಕೋಲ್ಕತಾ ರಾಜಧಾನಿ ಎಕ್ಸ್ ಪ್ರೆಸ್‍ನಲ್ಲಿ ಪ್ರತಿ ಕಿ.ಮೀ.ಗೆ 4 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಅಂದರೆ ಅಂದಾಜು 58 ರೂ. ಅಧಿಕವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top