fbpx
ಸಮಾಚಾರ

ಬುಧವಾರ ಭಾರತ್ ಬಂದ್: ಏನು ಇರುತ್ತೆ? ಏನು ಇರಲ್ಲ?

ಹಲವು ಸಮಸ್ಯೆಗಳನ್ನು ಇಟ್ಟುಕೊಂಡು ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಬುಧವಾರ (ಜ.8) ಭಾರತ ಬಂದ್​ಗೆ ಕರೆ ನೀಡಿವೆ. ಭಾರತ ಬಂದ್​ಗೆ ಹಲವು ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ನೌಕರರು ಬೆಂಬಲ ನೀಡಿದ್ದಾರೆ. ಬಂದ್​ನಿಂದಾಗಿ ಯಾವೆಲ್ಲ ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆ ದಿನದ ಪರಿಸ್ಥಿತಿ ಅವಲೋಕಿಸಿ, ಶಾಲಾ-ಕಾಲೇಜಿಗೆ ರಜೆ ನೀಡಲು ಆಯಾ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

​ಭಾರತ್ ಬಂದ್‌: ಪ್ರತಿಭಟನಾಕಾರರ ಬೇಡಿಕೆಗಳೇನು?
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಗೆ ವಿರೋಧ.
ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣಾ ಕ್ರಮಗಳಿಗೆ ವಿರೋಧ.
ಕನಿಷ್ಟ ವೇತನ 21 ಸಾವಿರ ರೂ.ನಿಂದ 24 ಸಾವಿರ ರೂ.ಗೆ ಏರಿಕೆ ಮಾಡಲು ಆಗ್ರಹ.
ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ.
ಪೌರತ್ವ ತಿದ್ದುಪಡಿ ಕಾಯ್ದೆ (CAA) ಹಿಂತೆಗೆದುಕೊಳ್ಳಲು ಆಗ್ರಹ.
ರಾಷ್ಟ್ರೀಯ ಪೌರತ್ವ ನೋಂದಣಿ (NRC) ಹಿಂತೆಗೆತಕ್ಕೆ ಆಗ್ರಹ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಿಂತೆಗೆತಕ್ಕೆ ಆಗ್ರಹ (NPR).
10 ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ 4 ಅತಿದೊಡ್ಡ ಬ್ಯಾಂಕ್‌ಗಳಾಗಿ ಪರಿವರ್ತಿಸುವುದಕ್ಕೆ ವಿರೋಧ.​

ಏನಿರಲ್ಲ?
ಬ್ಯಾಂಕುಗಳು ಬಂದ್ ಆಗಿರುತ್ತವೆ. ಎಲ್​ಐಸಿ ಕಚೇರಿ ಬಂದ್, ಸಹಕಾರಿ ಬ್ಯಾಂಕ್​ಗಳು ಸಹ ಬಂದ್​ ಆಗಿರುತ್ತವೆ. ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಾಸ ಉಂಟಾಗಲಿದೆ. ಬಸ್​ಗೆ ಕಲ್ಲು ಬಿದ್ದರೆ ಪ್ರತಿಭಟನೆ ವಿಕೋಪಕ್ಕೆ ತಿರುಗಿದರೆ ಸಾರ್ವಜನಿಕ ಬಸ್ ಸಂಚಾರ ರದ್ದುಗೊಳ್ಳುವ ಸಾಧ್ಯತೆ ಇದೆ.

ಏನಿರುತ್ತೆ?
ಕೆಎಸ್ ಆರ್ ಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಅಲ್ಲದೇ ಆಟೋ, ಟ್ಯಾಕ್ಸಿ, ಹೋಟೆಲ್ ಸೇವೆಗಳು ಇರಲಿದ್ದು, ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಇನ್ನು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜು ರಜೆ ಬಗ್ಗೆ ಇನ್ನೂ ಯಾವುದೇ ರೀತಿಯ ನಿರ್ಧಾರ ತೆಗೆದುಕೊಂಡಿಲ್ಲ. ಪ್ರತಿಭಟನೆಯ ಬಿಸಿ ಯಾವ ರೀತಿ ಇರಲಿದೆ ಎಂದು ನೋಡಿಕೊಂಡು ರಜೆ ಬಗ್ಗೆ ನಿರ್ಧಾರ ಮಾಡಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top