fbpx
ಸಮಾಚಾರ

ಜೆಎನ್‌ಯು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ದೀಪಿಕಾ ಪಡುಕೋಣೆ!

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪೊಲೀಸರು ನಡೆಸಿದ ಲಾಠಿಪ್ರಹಾರ ಹಾಗೂ ದುಷ್ಕರ್ಮಿಗಳು ನಡೆಸಿದ ಕೃತ್ಯವನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದೆ. ಇದೀಗ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಶಿಕ್ಷಕರ ಮೇಲೆ ದಾಳಿಯಾದ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‍ಯುಗೆ ಭೇಟಿ ನೀಡಿದ್ದಾರೆ.

ಜೆಎನ್ ಯು ಕ್ಯಾಂಪಸ್ ಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ, ಹಲ್ಲೆಗೊಳಗಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಜೈ ಭಿಮ್, ಜೈಮ್ ಎಂದು ಘೋಷಣೆ ಕೂಗುತ್ತಿದ್ದರು. ಆದರೆ ಅವರೊಂದಿಗೆ ನಿಂತಿದ್ದ ದೀಪಿಕಾ ಪಡುಕೋಣೆ ಯಾವುದೇ ಘೋಷಣೆ ಕೂಗದೇ ಮೌನವಾಗಿಯೇ ಪ್ರತಿಭಟಿಸಿದರು. ಅಲ್ಲದೆ ಈ ವೇಳೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಅಥವಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಲ್ಲ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರವನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾದರು. ಇದರಿಂದ ಬಿಜೆಪಿ ನಾಯಕರು ಕೆರಳಿದ್ದಾರೆ. ಬಾಲಿವುಡ್ ನಟಿಯ ಚಿತ್ರಗಳನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ.

ಕಳೆದ ಬಾನುವಾರ ಜೆಎನ್‍ಯು ವಿಶ್ವವಿದ್ಯಾಲಯದ ಕ್ಯಾಂಪಸ್‍ಗೆ ನುಗಿದ್ದ ಮುಸುಕು ದಾರಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ ಹಲವು ವಿದ್ಯಾರ್ಥಿಗಳು ಗಾಯಾಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಈ ಘಟನೆಯಾದ ಬಳಿಕ ಬಹಳಷ್ಟು ಮಂದಿ ಬಾಲಿವುಡ್ ನಟ ನಟಿಯರು ಸಾಮಾಜಿಕ ಜಾಲತಾಣದ ಮೂಲಕ ಹಲ್ಲೆಯನ್ನು ಖಂಡಿಸಿ, ವಿದ್ಯಾರ್ಥಿಗಳ ಪರ ನಿಂತಿದ್ದರು. ಈಗ ಛಪಾಕ್ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದ ದೀಪಿಕಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top