fbpx
ಸಮಾಚಾರ

“ಬೇಕಾದರೆ ಕನಕಪುರದಲ್ಲಿ ಕಲ್ಲು ಹೊಡೆಯುತ್ತೇನೆ, ಆದರೆ ದೆಹಲಿ ರಾಜಕೀಯಕ್ಕೆ ಮಾತ್ರ ಹೋಗಲ್ಲ” ಡಿಕೆ ಶಿವಕುಮಾರ್

ಕನಕಪುರದಲ್ಲಿ ಕಲ್ಲು ಒಡೆಯುತ್ತೇನೆ. ರೇಷ್ಮೆ, ಕಡಲೆ, ಅರಿಶಿನ ಬೆಳೆಯುತ್ತೇನೆ ವಿನಃ ಆದರೆ ದೆಹಲಿಗೆ ಹೋಗಲ್ಲ. ರಾಜ್ಯದಲ್ಲಿಯೇ ರಾಜಕಾರಣ ಮಾಡುತ್ತೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ನಾನು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಹುದ್ದೆ ಕೊಟ್ಟರೆ ಮಾತ್ರ ನಿಭಾಯಿಸುತ್ತೇನೆ. ಅದನ್ನು ಬಿಟ್ಟರೆ ನಾನು ದೆಹಲಿ ರಾಜಕೀಯಕ್ಕೆ ಹೋಗುವುದಿಲ್ಲ. ಬೇಕಾದರೆ, ಕನಕಪುರದಲ್ಲಿ ಕಲ್ಲು ಒಡೆಯುತ್ತೇನೆ ಅಥವಾ ರೇಷ್ಮೆ ಬೆಳೆಯುತ್ತೇನೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ಹೈಕಮಾಂಡ್​ ವಿರುದ್ಧ ಡಿಕೆಶಿ ಗರಂ ಆದರು.

ಇನ್ನೂ ರಾಜ್ಯದಲ್ಲಿಯೇ ರಾಜಕಾರಣ ಮಾಡುತ್ತೇನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಕೊಟ್ರೆ ಮಾತ್ರ ನಿಭಾಯಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಸಂಬಂಧಪಟ್ಟವರನ್ನು ಕೇಳಿ, ಎಐಸಿಸಿ ಅಧ್ಯಕ್ಷರು ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ, ನಾನು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿಲ್ಲ, ಕೆಪಿಸಿಸಿ ಅಧ್ಯಕ್ಷ ವಿಚಾರ ಈಗ ಮಾತನಾಡಲ್ಲ, ನನಗೇನು ಅಂತಹ ಅತುರವೂ ಇಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಇನ್ನು ಸಿಬಿಐ ಮೇಲೆ ನನಗೆ ನಂಬಿಕೆ ಇದೆ. ಸಿಬಿಐ ತನ್ನ ಗೌರವ ಉಳಿಸಿಕೊಂಡಿದೆ. ಯಾವುದೇ ನೋಟೀಸ್ ನನಗೆ ಕೊಟ್ಟಿಲ್ಲ ಎಂದ ಡಿ ಕೆ ಶಿವಕುಮಾರ್ ಅವರು, ಕೇಂದ್ರ ಸರಕಾರ ಸಿಬಿಐ ಅವರಿಗೆ ನನ್ನ ಮನೆ ಸುತ್ತಲೂ ಇರುವಂತೆ ಹೇಳಿದ್ದಾರೆ. ರಾಜ್ಯದಲ್ಲಿ ಲೋಕಾಯುಕ್ತ ಎಸಿಬಿ ಇದ್ದರೂ ಸಿಎಂ ಸಿಬಿಐಗೆ ಪತ್ರ ಬರೆದಿದ್ದಾರೆ. ಎಲ್ಲವನ್ನೂ ಆರ್ ಟಿಐ ಅಡಿ ದಾಖಲೆ ತೆಗೆದುಕೊಂಡಿದ್ದೇನೆ. ಮಾಧ್ಯಮಗಳ ಮುಂದೆ ಏನು ಹೇಳಲ್ಲ. ದಾಖಲೆಗೆ ಹೋಗುವ ಕಡೆ ಎಲ್ಲವನ್ನೂ ಬಹಿರಂಗ ಮಾಡ್ತೀನಿ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top