fbpx
ಸಮಾಚಾರ

ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್​ಮ್ಯಾನ್​ಗೆ ಜಗ್ಗೇಶ್ ಕಡೆಯಿಂದ ಉಡುಗೊರೆ

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ನವರಸ ನಾಯಕ ಜಗ್ಗೇಶ್ ಒಂದು ಲಕ್ಷ ಘೋಷಣೆ ಮಾಡಿದ್ದಾರೆ.

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಜವಾಬ್ದಾರಿಯನ್ನು ಉತ್ತರಪ್ರದೇಶದ ಪೊಲೀಸರು, ಹ್ಯಾಂಗ್​​ಮ್ಯಾನ್​ ಪವನ್​ ಜಲ್ಲಾದ್​ಗೆ ನೀಡಿದ್ದಾರೆ. ಪವನ್​ ಜಲ್ಲಾದ್​ ಸದ್ಯ ತಮ್ಮ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದು ಮೈತುಂಬಾ ಸಾಲ ಮಾಡಿಕೊಂಡಿದ್ದಾರೆ. ಅಲ್ಲದೆ, ಮಗಳ ಮದುವೆಗೆ ದುಡ್ಡು ಹೊಂದಿಸಲಾಗದೇ, ಪರದಾಡುತ್ತಿದ್ದಾರೆ.

ಮಾನ್ಯರೆ ರಾಕ್ಷಸ ಸಂಹಾರ
ದೇವರ ನಿಯಮ!ಆ ಕಾರ್ಯದಿಂದ ಬರುವ ಹಣದಿಂದ ಮಗಳ ಮದುವೆ ಮಾಡುವೆ ಎಂದ ನಿಮ್ಮ ಅನಿಸಿಕೆ ಕೇಳಿ ಭಾವುಕನಾದೆ!
ನೀವೆ ಆ ಪಾಪಿಗಳ ನೇಣಿಗೇರಿಸಿದರೆ ನಾನು
ಕಲೆಯಿಂದ ದುಡಿದ 1ಲಕ್ಷ ರೂ
ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ! ಇಂದೆ ಆ ಹಣ ನಿಮಗಾಗಿ ಮೀಸಲಿಟ್ಟೆ!
ದುರುಳ ನಿಗ್ರಹ ದೇವರ ಸೇವೆ!
ಹರಿಓಂ… https://t.co/x6H8aBhH0C— ನವರಸನಾಯಕ ಜಗ್ಗೇಶ್ (@Jaggesh2) January 9, 2020

ಪವನ್ ಅವರು ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿದರೆ ಅದರಿಂದ ಬರುವ ದುಡ್ಡಿನಲ್ಲಿ ನನ್ನ ಮಗಳ ಮದುವೆ ಮಾಡುತ್ತೇನೆ. ಸರ್ಕಾರ ನಂಗೆ ಒಂದು ಲಕ್ಷ ನೀಡುತ್ತದೆ. ನಾನು ಬಡತನದಿಂದ ಕುಸಿದು ಹೋಗಿದ್ದೆ. ಈಗ ಈ ಕರ್ತವ್ಯ ನಿರ್ವಹಿಸಲು ಹೇಳಿದ್ದಾರೆ. ಹೀಗಾದರೆ ನನಗೆ ಒಂದು ಲಕ್ಷ ದುಡ್ಡು ಬರುತ್ತದೆ. ಮಗಳ ಮದುವೆ ಮಾಡುತ್ತೇನೆ. ಗಲ್ಲಿಗೇರಿಸಲು ನಾನು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರೇ ಕೊಟ್ಟ ಅವಕಾಶ ಎಂದು ಭಾವುಕರಾಗಿ ಪವನ್ ಜಲ್ಲಾದ್ ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದರು.

ಪವನ್​ ಹೇಳಿದ ಈ ಮಾತಿನ ಬಗ್ಗೆ ಸುದ್ದಿಯೊಂದನ್ನು ಓದಿದ ನವರಸ ನಾಯಕ ಜಗ್ಗೇಶ್​, ಪವನ್​ಗೆ ಒಂದು ಲಕ್ಷ ರೂಪಾಯಿ ಕೊಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರುವ ಜಗ್ಗೇಶ್ ” ಮಾನ್ಯರೆ ರಾಕ್ಷಸ ಸಂಹಾರ ದೇವರ ನಿಯಮ! ಆ ಕಾರ್ಯದಿಂದ ಬರುವ ಹಣದಿಂದ ಮಗಳ ಮದುವೆ ಮಾಡುವೆ ಎಂದ ನಿಮ್ಮ ಅನಿಸಿಕೆ ಕೇಳಿ ಭಾವುಕನಾದೆ. ನೀವೆ ಆ ಪಾಪಿಗಳ ನೇಣಿಗೇರಿಸಿದರೆ ನಾನು, ಕಲೆಯಿಂದ ದುಡಿದ 1ಲಕ್ಷ ರೂಪಾಯಿಯನ್ನು ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ. ಇಂದೆ ಆ ಹಣ ನಿಮಗಾಗಿ ಮೀಸಲಿಟ್ಟಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top