fbpx
ಸಮಾಚಾರ

JNU ಎಫೆಕ್ಟ್: ದೀಪಿಕಾ ಟ್ವಿಟ್ಟರ್ ಫಾಲೋಯರ್ಸ್ ಸಂಖ್ಯೆಯಲ್ಲಿ ಏರಿಕೆ!

ದೆಹಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಘಟನೆಯನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಇದೀಗ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹಲ್ಲೆಗೊಳಗಾದ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ದೆಹಲಿಯ ಜೆಎನ್‌ಯು ವಿವಿ ಆವರಣದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಕ್ಯಾಂಪಸ್‌ನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವಿದ್ಯಾರ್ಥಿನಿ ನಾಯಕಿ ಆಯಿಷಿ ಘೋಷ್‌ ಅವರನ್ನು ಭೇಟಿ ಮಾಡಿ ಕೈ ಮುಗಿದು ನಮಸ್ಕರಿಸಿದ ಫೋಟೋ ವೈರಲ್ ಆಗುತ್ತಿದೆ. ದೀಪಿಕಾ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಚಾಲ್ತಿಯಲ್ಲಿವೆ.

ಈ ಮದ್ಯೆ ದೀಪಿಕಾ ಪಡುಕೋಣೆ ಜೆಎನ್‌ಯು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡ ಮೇಲೆ ಟ್ವಿಟ್ಟರ್‌ನಲ್ಲಿಅವರನ್ನು ಫಾಲೋ ಮಾಡುವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ. ಅವರ ನಡೆಯ ಬಗ್ಗೆ ಪರ ವಿರೋಧ ಚರ್ಚೆಗಳು ಕೇಳಿ ಬಂದರೂ ಎರಡೇ ದಿನಗಳಲ್ಲಿಅವರಿಗೆ ಸುಮಾರು 40 ಸಾವಿರದಷ್ಟು ಹೊಸ ಫಾಲೋಯರ್‌ಗಳು ಸಿಕ್ಕಿದ್ದಾರೆ. ಈ ಮೂಲಕ ಟ್ವಿಟ್ಟರ್‌ನಲ್ಲಿ ಅವರನ್ನು ಫಾಲೋ ಮಾಡುವವರ ಸಂಖ್ಯೆ 26.8 ದಶಲಕ್ಷಕ್ಕೆ ತಲುಪಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top