fbpx
ಸಮಾಚಾರ

JNU ಭೇಟಿ ಎಫೆಕ್ಟ್: ‘ಸ್ಕಿಲ್ ಇಂಡಿಯಾ’ ದಿಂದ ದೀಪಿಕಾರನ್ನು ಕೈಬಿಟ್ಟ ಕೇಂದ್ರ ಸರ್ಕಾರ!

ದೆಹಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಘಟನೆಯನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಇದೀಗ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹಲ್ಲೆಗೊಳಗಾದ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟುಹಾಕಿದೆ.

ದೆಹಲಿಯ ಜೆಎನ್‌ಯು ವಿವಿ ಆವರಣದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಕ್ಯಾಂಪಸ್‌ನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವಿದ್ಯಾರ್ಥಿನಿ ನಾಯಕಿ ಆಯಿಷಿ ಘೋಷ್‌ ಅವರನ್ನು ಭೇಟಿ ಮಾಡಿ ಕೈ ಮುಗಿದು ನಮಸ್ಕರಿಸಿದ ಫೋಟೋ ವೈರಲ್ ಆಗುತ್ತಿದೆ. ದೀಪಿಕಾ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಚಾಲ್ತಿಯಲ್ಲಿವೆ.

ಈ ಮದ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ‘ಸ್ಕಿಲ್ ಇಂಡಿಯಾ’ ಕಾರ್ಯಕ್ರಮ ಪ್ರಚಾರ ವಿಡಿಯೋದಿಂದ ದೀಪಿಕಾ ಮಾತನಾಡಿದ ಭಾಗವನ್ನು ತೆಗೆದು ಹಾಕಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳಿಂದ ದೀಪಿಕಾಗೆ ಗೇಟ್ ಪಾಸ್ ನೀಡಲಾಗಿದೆ.

ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಂದಹಾಗೆ ‘ಛಪಕ್’ ಸಿನಿಮಾದಲ್ಲಿ ದೀಪಿಕಾ ಆಸಿಡ್ ದಾಳಿಗೊಳಗಾದ ಯುವತಿಯ ಪಾತ್ರ ಮಾಡಿದ್ದರು. ಇದರಲ್ಲಿ ಆ ಯುವತಿ ತನ್ನ ಮೇಲಾದ ದೈಹಿಕ ದಾಳಿಯ ಹೊರತಾಗಿಯೂ ಜೀವನದಲ್ಲಿ ಮುನ್ನಗ್ಗುವ ಸ್ಪೂರ್ತಿದಾಯಕ ಕತೆಯಿದೆ. ಇದೇ ಕಾರಣಕ್ಕೆ ದೀಪಿಕಾರನ್ನು ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಈ ವಿಡಿಯೋದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ವಿವಾದದ ಬಳಿಕ ಕೇಂದ್ರ ದೀಪಿಕಾರನ್ನು ಕೈ ಬಿಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top