fbpx
ಸಮಾಚಾರ

ಕೆಪಿಟಿಸಿಎಲ್ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ, ಬೆಂಗಳೂರಲ್ಲಿ ಕೆಲಸ!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಜನವರಿ 2020 ಕೊನೆಯ ದಿನವಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ವಿದ್ಯಾರ್ಹತೆ:
ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಸಿವಿಲ್‌ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಪ್ರೌಢ ದರ್ಜೆಯಲ್ಲಿ ಶೀಘ್ರಲಿಪಿ ಮತ್ತು ಪ್ರೌಢದರ್ಜೆಯಲ್ಲಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಜನವರಿ 20,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:
ಅರ್ಜಿಗಳನ್ನು ಸಲ್ಲಿಸುವ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500 ರೂ., ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಯ ಬಗೆಗಿನ ಅಧಿಸೂಚನೆ ಓದಲು ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top