fbpx
ಸಮಾಚಾರ

SBIನಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ: ಬೆಂಗಳೂರಲ್ಲಿ 475 ಹುದ್ದೆಗಳ ಭರ್ತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 8134 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 26ರೊಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಬೆಂಗಳೂರಿನಲ್ಲಿ 475 ಹುದ್ದೆಗಳಿವೆ.

ಹುದ್ದೆಗಳ ಒಟ್ಟು ಸಂಖ್ಯೆ: 8243

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವೇತನ ಶ್ರೇಣಿ:
₹ 11765 (ಮೂಲ ವೇತನ) ಸೇರಿದಂತೆ ಇತರೆ ಭತ್ಯೆಗಳು ಸೇರಿ ಮಾಸಿಕ ₹ 31,450 ವೇತನ ಪಡೆಯಬಹುದು.

ವಯಸ್ಸು:
01–01–2020ಕ್ಕೆ ಕನಿಷ್ಠ 20 ವರ್ಷಗಳು, ಗರಿಷ್ಠ 28 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೆ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ಅಧಿಕೃತ ಭಾಷೆಗಳ ಕುರಿತು ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ bank.sbi/careers ಅಥವಾ www.sbi.co.in ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top