fbpx
ಸಮಾಚಾರ

“ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲ” ಡಿಸಿಎಂ ಅಶ್ವತ್ಥನಾರಾಯಣ ಹೇಳಿಕೆ

‘ಕರ್ನಾಟಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲ. ಸಂಪರ್ಕ ಕೊರತೆಯಿಂದ ಯುವಕರು ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನೆನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅವರು “ರಾಜ್ಯದಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಇವೆ. ಸಂಪರ್ಕ ಕೊರತೆಯಿಂದ ಯುವಕರು ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರೌಢಶಾಲೆ, ಕಾಲೇಜುಗಳಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ತೆರೆದು ಉದ್ಯೋಗ ಮಾಹಿತಿ ನೀಡುವ ಕಾರ್ಯ ಕ್ರಮ ರೂಪಿಸಲಾಗುತ್ತಿದೆ. ಉದ್ಯೋಗ ಮಾಹಿತಿ ಸಲುವಾಗಿ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಒಂದೇ ವೇದಿಕೆಗೆ ತರಲಾಗುವುದು” ಎಂದು ಹೇಳಿದ್ದಾರೆ,

ರಾಜ್ಯದಲ್ಲಿ ಯುವಕರು ಕೆಲಸಕ್ಕಾಗಿ ಎದುರು ನೋಡುತ್ತಿರುವ ಈ ವೇಳೆಯಲ್ಲಿ ಉಪಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿರುವುದು ಪ್ರತಿಭಾನ್ವಿತ ಯುವಕರ ಕೋಪಕ್ಕೆ ಕಾರಣವಾಗಿದೆ. ನಿರುದ್ಯೋಗದ ಸಮಸ್ಯೆ ಇಲ್ಲ, ವಾಸ್ತವದಲ್ಲಿ ಉದ್ಯೋಗ ಭರ್ತಿ ಮಾಡಲು ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top